ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಭಾರತದ ಪ್ರವಾಸಕ್ಕೆ ಬಂದಿರುವ ವಿದೇಶಿ ಯೂಟ್ಯೂಬರ್ ಒಬ್ಬರ ಮೇಲೆ ಬೆಂಗಳೂರಿನ ಚಿಕ್ಕಪೇಟೆ ಚೋರ್ ಬಜಾರ್ ನಲ್ಲಿ ಸ್ಥಳೀಯ ವ್ಯಾಪಾರಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದೆ.
ನವಾಬ್ ಎಂಬ ವ್ಯಾಪಾರಿ ಹಲ್ಲೆ ನಡೆಸಿದ ಆರೋಪಿ. ನೆದರ್ ಲ್ಯಾಂಡ್ ಪ್ರಜೆ ಪೆಡ್ರೋ ಮೊಟಾ ಎನ್ನುವ ಯೂಟ್ಯೂಬರ್ ಚಿಕ್ಕಪೇಟೆಯ ಚೋರ್ ಬಜಾರ್ ನಲ್ಲಿ ವಿಡಿಯೋ ಶೂಟ್ ಮಾಡುತ್ತಿದ್ದರು. ಈ ವೇಳೆ ವ್ಯಾಪಾರಿ ಅಡ್ಡಿಪಡಿಸಿದ್ದು ದೂಹಿಕವಾಗಿ ಹಲ್ಲೆ ನಡೆಸಿದ್ದಾಗಿ ಪೆಡ್ರೋ ತಮ್ಹೇಮ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.
ದೇಶಕ್ಕೆ ಅತಿಥಿಯಾಗಿ ಬಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸುವ ಮೂಲಕ ದೇಶದ ಮಾನ ಹರಾಜು ಮಾಡುವ ಕೃತ್ಯ ಇದಾಗಿದೆ ಎಂದು ಜಾಲತಾಣಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೆಲ ಸ್ಥಳೀಯರು ಈ ಘಟನೆ ಬಗ್ಗೆ ಪಶ್ಚಿಮ ಡಿಸಿಪಿ ಗಮನ ಸೆಳೆದಿದ್ದು, ಪೊಲೀಸರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿ ನವಾಬ್ ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ