Kannada NewsKarnataka NewsLatest
ವಿದ್ಯಾರ್ಥಿನಿಯರ ಪ್ರತಿಭಟನೆ

ವಿದ್ಯಾರ್ಥಿನಿಯರ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬಸ್ ಪಾಸ್ ಒದಗಿಸಲು ಸಾರಿಗೆ ಇಲಾಖೆ ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಬೆಳಗಾವಿ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯರು ಇಂದು ಪ್ರತಿಭಟನೆ ನಡೆಸಿದರು.
ಕೆಎಸ್ಆರ್ ಟಿಸಿ ವತಿಯಿಂದ ನಮಗೆ ಹಲವು ದಿನಗಳಿಂದ ಬಸ್ ಪಾಸ್ ಒದಗಿಸುತ್ತಿಲ್ಲ. ತಿಂಗಳ ಹಿಂದೆಯೇ ಬಸ್ ಪಾಸ್ ಗಾಗಿ ಹಣ ಸಹ ಪಡೆದುಕೊಳ್ಳಲಾಗಿದೆ. ನಿತ್ಯ ಟಿಕೇಟ್ ಪಡೆದು ಬರಬೇಕಾದ ಅನಿವಾರ್ಯತೆ ಒದಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು.
ಜುಲೈ ತಿಂಗಳು ಮುಗಿಯುತ್ತ ಬಂದರೂ ಬಸ್ ಪಾಸ್ ಒದಗಿಸದೇ ಹಾರಿಕೆ ಉತ್ತರ ನೀಡಲಾಗುತ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು.
ಜಿಲ್ಲಾಧಿಕಾರಿ ಕಚೇರಿಯಿಂದ ಸಾರಿಗೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.




