Latest

*ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಐವರು ದುರ್ಮರಣ; 30,000 ಜನರ ಸ್ಥಳಾಂತರ*

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಗುಜರಾತ್ ನಲುಗಿದ್ದು, ಚಂಡಮಾರುತದಿಂದ ಆದ ಅನಾಹುತಕ್ಕೆ ಈವರೆಗೆ ಐವರು ಸಾವನ್ನಪ್ಪಿದ್ದಾರೆ.

ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರ ಗಜಗಾತ್ರದ ಅಲೆಗಳು ಏಳುತ್ತಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಅಲೆಗಳ ಹೊಡೆತಕ್ಕೆ ಸಮುದ್ರ ತೀರದ ಮನೆಗಳು ಕುಸಿದು ಬಿದ್ದಿವೆ. ಗುಜರಾತ್ ಕರಾವಳಿ ತೀರದಲ್ಲಿ ಬಿರುಗಾಳಿ, ಮಳೆಯಿಂದಾಗಿ ಐವರು ಸಾವನ್ನಪ್ಪಿದ್ದಾರೆ.

ಸೌರಾಷ್ಟ್ರ, ಕಚ್ ಜಿಲ್ಲೆಗಳಲ್ಲಿ 30,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಕಛ್ ನಲ್ಲಿ 14,088 ಜನರನ್ನು , ದ್ವಾರಕಾದಲ್ಲಿ 5000, ರಾಜ್ ಕೋಟ್ ನಲ್ಲಿ 4,000, ಮೊರ್ಬಿಯಲ್ಲಿ 2000, ಜಾಮ್ ನಗರದಲ್ಲಿ 1500 ಜನರನ್ನು ಸ್ಥಳಾಂತರಿಸಲಾಗಿದೆ.

284 ಗರ್ಭಿಣಿಯರು ಸೇರಿ 30,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿಯೂ ಚಂದಮಾರುತದ ಅಬ್ಬರಕ್ಕೆ ಸಮುದ್ರದ ಅಲೆಗಳು ಹೆಚ್ಚುತ್ತಿದ್ದು, ಮುರುಡೆಶ್ವರ ಕಡಲಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button