ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಟ್ ಕಾಯಿನ್ ಪ್ರಕರಣವನ್ನು ಮರು ತನಿಖೆ ನಡೆಸು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದು 20 ದಿನ ಆಗಿದೆ. ಬಿಜೆಪಿಯವರು ಸ್ವಲ್ಪ ಸಮಾಧಾನವಾಗಿದ್ದಎ ಒಳ್ಳೆಯದು ಎಂದು ಹೇಳಿದರು.
ಇನ್ನು ಅಧಿಕಾರಿಗಳ ಜೊತೆ ರಣದೀಪ್ ಸುರ್ಜೇವಾಲ ಸಭೆ ನಡೆಸಿರುವ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪರಮೇಶ್ವರ್, ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸುತ್ತಿದ್ದರು. ಆಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಬಂದಿದ್ದಾರೆ. ವಿಧಾನಸೌಧದಲ್ಲಿ ಸಭೆ ನಡೆದಿದ್ದರೆ ಆಗ ಬಂದಿದ್ದರೆ ತಪ್ಪು. ಆದರೆ ಸಭೆ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿತ್ತು. ಆಗ ಬಂದಿದ್ದಾರೆ, ಇದರಲ್ಲಿ ತಪ್ಪೇನು ಇಲ್ಲ. ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದಾದರೆ ನೀಡಲಿ. ರಾಜ್ಯಪಾಲರು ಪರಿಶೀಲನೆ ಮಾಡುತ್ತಾರೆ ಎಂದರು.
ಎಸ್.ಎಂ.ಕೃಷ್ಣ ಸಿಎಂ ಆಗಿದ್ದಾಗ ನಾನೂ ಸಚಿವನಾಗಿದ್ದೆ. ಆಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಗುಲಾಂ ನಬಿ ಆಜಾದ್ ನಮ್ಮಿಂದ ಮಾಹಿತಿ ಪಡೆಯುತ್ತಿದ್ದರು. ಇದರಲ್ಲಿ ಯಾವುದೇ ತಪ್ಪು ಇಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ