Latest

*ವಿದ್ಯುತ್ ದರ ಏರಿಕೆಗೆ ಬಿಜೆಪಿ ಆಕ್ರೋಶ; ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ; ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಪ್ರಹಾರ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Home add -Advt

ಮೆಸ್ಕಾಂ ಕಚೇರಿಯ ಕಿಟಕಿಗಳು, ನೋಟಿಸ್ ಬೋರ್ಡ್ ಗಳನ್ನು ಛಿದ್ರ ಛಿದ್ರಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

Related Articles

Back to top button