ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ನನ್ನ ಜೀವನದಲ್ಲಿ ನಾನು ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ. ಅದರ ಅವಶ್ಯಕತೆ ನನಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಮಾತನಾಡಿದವರಿಗೂ ಎಲ್ಲಾ ಪಕ್ಷದಲ್ಲಿಯೂ ಸ್ನೇಹಿತರಿದ್ದಾರೆ. ಇದನ್ನೇ ದೊಡ್ಡ ವಿಷಯ ಮಾಡುವ ಅಗತ್ಯವಿಲ್ಲ. ನಾವು ಸಿದ್ದರಾಮಯ್ಯ ವಿರುದ್ಧ ಹೊಸ 5 ಕೇಸ್ ದಾಖಲಿಸಿದ್ದೇವೆ. ಒಟ್ಟು 65 ಕೇಸ್ ಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇವೆ. ಪ್ರತಾಪ್ ಸಿಂಹಗೆ ಮಾಹಿತಿ ಇಲ್ಲ ಎಂದು ತಿರುಗೇಟು ನೀಡಿದರು.
ನನಗೆ ಹೊಂದಾಣಿಕೆ ರಾಜಕೀಯದ ಅವಶ್ಯಕತೆ ಇಲ್ಲ. ಶಾಮನೂರು ಭೇಟಿ ವಿಚಾರವಾಗಿ ಈಗಾಗಲೇ ಹೇಳಿದ್ದೇನೆ. ಶಾಮನೂರು ನಾವು ಹಳೆಯ ಸ್ನೇಹಿತರು. ಹೀಗಾಗಿ ಭೇಟಿಯಾಗಿದ್ದೆವು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ