ಪ್ರಗತಿವಾಹಿನಿ ಸುದ್ದಿ, ಇಂಫಾಲ: ಮಣಿಪುರ ರಾಜ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ.
ಬಾಂಬ್ ದಾಳಿಗೀಡಾದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ರಾಜ್ಯದಲ್ಲಿ ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ವಿಷಯದಲ್ಲಿ ರಾಜ್ಯದಲ್ಲಿ ಪದೇಪದೆ ಹಿಂಸಾಚಾರಗಳು ಉದ್ಭವಿಸುತ್ತಿವೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದ್ದರೂ ಗುರುವಾರ ಪುನಃ ದಂಗೆ ಶುರುವಾಗಿದೆ.
ಗಲಭೆಯಲ್ಲಿ ಕಂಡಕಂಡ ವಾಹನಗಳನ್ನು ಉದ್ರಿಕ್ತ ಜನ ಸುಡುತ್ತಿದ್ದು, ಸಚಿವರ ನಿವಾಸಕ್ಕೆ 9 ಜನ ಎಸ್ಕಾರ್ಟ್ ಸಿಬ್ಬಂದಿ, ಐವರು ಸೆಕ್ಯುರಿಟಿ ಗಾರ್ಡ್ ಗಳು ಹಾಗೂ ಎಂಟು ಜನ ಹೆಚ್ಚುವರಿ ಸೆಕ್ಯುರಿಟಿ ಗಾರ್ಡ್ ಗಳು ಇದ್ದಾಗಲೂ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಸರಕಾರ ಮುಂದಾಗಿದ್ದು ಹಲವೆಡೆ ಕರ್ಫ್ಯೂ ವಿಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ