Latest

*ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಷ್ಟನೆ ನೀಡಿದ ಸಚಿವರು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಜೊತೆ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದ್ದು, ಈ ಬಗ್ಗೆ ಸಮಾಜಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓಡುವುದನ್ನು ಕಡ್ಡಾಯ ಅಮಡಲಾಗಿದೆ. ಒಂದು ನಿಮಿಷದ ಸಂವಿಧಾನ ಪೀಠಿಕೆ ಸಮಾನತೆಯ ಬದುಕು ಕಲಿಸುತ್ತದೆ ಎಂದರು.

ಸಂವಿಧಾನ ಪೀಠಿಕೆ ಮೂಲಕ ಮಕ್ಕಳಲ್ಲಿ ಸಮಾನತೆಯನ್ನು ಕಲಿಸಬಹುದು. ಇದು ದೇಶದ 140 ಕೋಟಿ ಜನರಿಗೂ ಅನ್ವಯವಾಗಲಿದೆ. ಸಂವಿಧಾನ ತಿದ್ದುಪಡಿಗೆ ಅವಕಾಶವಿದೆ. ಆದರೆ ತಿರುಚಲು ಅವಕಾಶವಿಲ್ಲ ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button