ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಮಾನ ನಿಲ್ದಾಣದೊಳಗೆ ಬಸ್ ಅಪಘಾತಸಂಭವಿಸಿ 25 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ತೆರಳುವ ಶೆಟಲ್ ಬಸ್ ಬೆಳಿಗ್ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದಿಂದಾಗಿ ಬಸ್ ನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳಿಗೆ ಏರ್ ಪೋರ್ಟ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ