Latest
*ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಜೂನ್ 20ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಅಲ್ಲದೇ ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




