ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂಗಾರು ಮಳೆ ವಿಳಂಬದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೀವಜಲಕ್ಕೂ ಸಮಸ್ಯೆಯಾಗಿದ್ದು, ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ.
ಮಳೆ ಕೊರತೆಯಿಂದಾಗಿ ಜಲಾಶಯಗಳು ಬರದಿಗಾದ್ದು, ಮುಮ್ಗಾರು ನಿರೀಕ್ಷೆಯಲ್ಲಿ ಬಿತ್ತನೆ ಆರಂಭಿಸಿದ್ದ ರೈತರು ಮಳೆಯಿಲ್ಲದೇ ಕಂಗಾಲಾಗಿದ್ದಾರೆ. ಬಿತ್ತಿದ ಭತ್ತ, ರಾಗಿ, ಗೋದಿ ಒಣಗಲಾರಂಭಿಸಿದ್ದು, ಹೊಲಗಳು ನೀರಿಲ್ಲದೇ ಬಿರುಕು ಬಿಡುತ್ತಿವೆ. ಇನ್ನೊಂದೆಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯುಂಟಾಗಿದ್ದು, ಜನರು ಪರಿತಪಿಸುವಂತಾಗಿದೆ.
ಉತ್ತರ ಕರ್ನಟಕ ಭಾಗದ 6 ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಈ ಭಾಗದ ಜನರ ದಾಹ ತಣಿಸುತ್ತಿದ್ದ ಕೊಯ್ನಾ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, ಡ್ಯಾಂ ನಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ಹಂತ ತಲುಪಿದೆ.
ಕೊಯ್ನಾ ಜಲಾಶಯದಲ್ಲಿ ಕೇಮಲ 11.74 ಟಿಎಂಸಿ ಮಾತ್ರ ನೀರಿದ್ದು, ಇಡೀ ಜಲಾಶಯ ಬರಿದಾಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ,ರಾಯಚೂರು, ಗದಗ ಜಿಲ್ಲೆಗಳಲ್ಲಿ ನೀರಿನ ಸಮಸೆ ಎದುರಾಗಿದ್ದು, ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಾತ್ರವಲ್ಲ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ