ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಇಂದು ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತ ಇದಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ಸೆಲ್ವಿ, ಶ್ರೀವಾತ್ಸವ್, ನೀರಜ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ