Kannada NewsKarnataka NewsPolitics

*ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿ* 

*ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ*

*ಕೇಂದ್ರ ಆಹಾರ ಸಚಿವ ಪಿಯೂಶ್ ವೇದಪ್ರಕಾಶ್ ಗೋಯಲ್ ಜತೆ ಚರ್ಚಿಸುವ ಭರವಸೆ ನೀಡಿದ ಅಮಿತ್ ಶಾ* 

ಪ್ರಗತಿವಾಹಿನಿ ಸುದ್ದಿ, ನವದೆಹಲಿ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು  ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು. 

ಸೌಹಾರ್ದ ಭೇಟಿಯ ವೇಳೆ , “ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button