Kannada NewsKarnataka NewsLatest

*ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಖಾತೆ ಬದಲಾವಣೆಗಾಗಿ 20 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಪಿಡಿಒ ನನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button