*ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ ಎಂದ ಮಾಜಿ ಸಚಿವೆ ಶಶಿಕಲಾ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲಾ. ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರನ್ನೂ ವರಿಷ್ಠರು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಮರ್ಥ ನಾಯಕ ಸಂಘಟನಾ ಕೌಶಲ್ಯ ಇರುವ ನಾಯಕರು ಇದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರು ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರನ್ನೂ ಘೋಷಣೆ ಮಾಡುತ್ತಾರೆ. ಇಬ್ಬರೂ ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗುತ್ತಾರೆ. ಅವರನ ನೇತೃತ್ವದಲ್ಲಿ ನಡೆಯುತ್ತೇವೆ ಎಂದರು.
ಬಿಜೆಪಿ ಪಕ್ಷದ ಆಂತರಿಕ ಕಚ್ಚಾಟದಿಂದ ಬಿಜೆಪಿ ಸೋಲು ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವದು, ಬಿಜೆಪಿಯಲ್ಲಿ ಆತಂರಿಕ ಕಚ್ಚಾಟವಿಲ್ಲ, ಕೆಲವೊಂದು ಕಾರಣಗಳಿಂದ ಪಕ್ಷ ಸೋತಿರಬಹುದು. ಪಕ್ಷ ಸೋಲಲು ಬೇರೆ ಬೇರೆ ಕಾರಣ ಕೂಡ ಇತ್ತು ಎಂದರು.
ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಯೋಜನೆ ಜಾರಿಗೆ ವಿಳಂಬ ವಿಚಾರಕ್ಕೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಹೆಣ್ಣು ಮಕ್ಕಳು ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತರಬಹುದು. ಇವತ್ತಿನ ಪರಿಸ್ಥಿತಿಯಲ್ಲಿ ಅದು ಜಾರಿ ಆಗದೇ ಅದಕ್ಕೆ ಬರುವ ಸಮಸ್ಯೆ ನೋಡಿ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.
ಅಕ್ಕಿ ವಿಚಾರದಲ್ಲಿ ಮೋದಿ ಟಾರ್ಗೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದನ್ನು ನಾವು ಖಂಡನೇ ಮಾಡುತ್ತೇವೆ. ಕಾಂಗ್ರೆಸ್ ನಿಂದಪ್ರಧಾನಿ ಮೋದಿಯವರ ಮೇಲೆ ಆರೋಪಮಾಡಲಾಗುತ್ತಿದೆ. ಮೋದಿ ಅವರು ಕೊಟ್ಟ ಅಕ್ಕಿ ಇದೆ. ಅದನ್ನು ಹೇಳಬೇಕಿತ್ತು. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಸೇರಿಸಿ ಕೊಡುತ್ತೇನೆ ಎಂದು ಹೇಳಿದ್ದರೆ ಒಪ್ಪಿಕೊಳ್ಳುತ್ತಿದ್ದೇವು. ಈಗ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ರಾಜ್ಯ ಸರ್ಕಾರದ 10 ಕೆಜಿ ಅಕ್ಕಿ ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ