ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶ, ಪ್ರಮುಖವಾಗಿ ಚಿತ್ರ ಸಾಹಿತಿಯಾಗಿ ಗುರುತಿಸಿಕೊಂಡಿದ್ದ ಸಿ.ವಿ.ಶಿವಶಂಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಿರಿವಂತನಾದರೆ ಕನ್ನಡ ನಾಡಲ್ಲಿ ಮರೆವೆ…. ಹಾಡನ್ನು ಬರೆದಿದ್ದರು. ಈ ಹಾಡು ಸಾಕಷ್ಟು ಜನಪ್ರಿಯತೆ ಗಳಿಸಿತ್ತು.
ಇಂದು ಮಧ್ಯಾಹ್ನ ಶಿವಶಂಕರ್ ಅವರಿಗೆ ಹೃದಯಾಘಾತವಾಗಿತ್ತು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 90 ವರ್ಷ ವಯಸ್ಸಾಗಿತ್ತು. ಯಾವುದೇ ಗಂಭೀರವಾದ ಆಯೋಗ್ಯ ಸಮಸ್ಯೆಗಳೂ ಕೂಡ ಇರಲಿಲ್ಲ.
ಹಿರಿಯ ನಟ, ನಿರ್ಧೇಶಕ ಶಿವಶಂಕರ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ಶಿವಶಂಕರ್, ಸ್ಕೂಲ್ ಮಾಸ್ಟರ್, ರತ್ನಗಿರಿ ರಹಸ್ಯ, ರತ್ನಮಂಜರಿ, ಕೃಷ್ಣ ಗಾರುಡಿಗ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ