Kannada NewsKarnataka NewsLatestUncategorized

*ಈ ಜಿಲ್ಲೆಗಳಲ್ಲಿ ಜುಲೈ 2ವರೆಗೆ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಹಲವು ಜಿಲ್ಲೆಗಳಲ್ಲಿ ಬರದ ಛಾಯೆಆವರಿಸಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 2ರವರೆಗೆ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button