Kannada NewsKarnataka NewsLatest

*ಮಗಳನ್ನೆ ಕತ್ತು ಹಿಸುಕಿ ಕೊಲೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದಿದೆ. ಪ್ರಿಯತಮೆ ಸಾವಿನ ಸುದ್ದಿ ತಿಳಿದು ಯುವಕ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Home add -Advt

20 ವರ್ಷದ ಕೀರ್ತಿ ಹಾಗೂ 23 ವರ್ಷದ ಗಂಗಾಧರ ಮೃತರು. ಮಗಳು ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದಳು ಅಲ್ಲದೇ ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ವಿಷಯ ಗೊತ್ತಾಗುತ್ತಿದ್ದಂತೆ ತಂದೆ ಕೃಷ್ಣಮೂರ್ತಿ ಮಗಳನ್ನು ಕತ್ತುಹಿಸುಕಿ ಹತ್ಯೆ ಮಾಡಿದ್ದಾನೆ. ವಿಷಯ ತಿಳಿದು ಆಘಾತಕ್ಕೊಳಗಾದ ಯುವಕ ಮೈಸೂರು-ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾಮಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Related Articles

Back to top button