Belagavi NewsBelgaum NewsKannada NewsKarnataka News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಶುಕ್ರವಾರ ಅನಾವರಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಆವರಣದಲ್ಲಿ ಜೂ. ೩೦ರಂದು ಮಾಜಿ ಸಚಿವರಾದ ಎಚ್ . ಎಂ. ರೇವಣ್ಣ ಅವರು ಪ್ರಾಯೋಜಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ್ ಲ. ಜಾರಕಿಹೊಳಿ ಅವರು ಅನಾವರಣಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್. ಹೆಬ್ಬಾಳಕರ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ. ಕೆ. ಗೋವಿಂದರಾಜು, ಮಾಜಿ ಸಚಿವರು ಹಾಗೂ ವಿಧಾನಪರಿಷತ್ತಿನ ಸದಸ್ಯರಾದ ಎಚ್.ಎಸ್. ವಿಶ್ವನಾಥ, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಅವರು ಆಗಮಿಸಲಿದ್ದಾರೆ. ಬೆಳಗಾವಿ ಉತ್ತರದ ಶಾಸಕರಾದ ಶ್ರೀ ಆಸಿಫ್ (ರಾಜು) ಸೇಠ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಸಂಸದರಾದ ಅನಂತಕುಮಾರ್ ಹೆಗಡೆ, ಚಿಕ್ಕೋಡಿಯ ಲೋಕಸಭಾ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯ ಸಭಾ ಸಂಸದರಾದ ಈರಣ್ಣ ಕಡಾಡಿ, ಬೆಳಗಾವಿ ಲೋಕಸಭಾ ಸಂಸದರಾದ ಮಂಗಳ ಅಂಗಡಿ, ಹಾಗೂ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಸಕರು, ಬೆಳಗಾವಿಯ ಪೂಜ್ಯ ಮಹಾಪೌರರು, ಜನಪ್ರತಿನಿಧಿಗಳು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ, ಕುಲಸಚಿವರಾದ ರಾಜಶ್ರೀ ಜೈನಾಪುರ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಶಿವಾನಂದ ಗೊರನಾಳೆ, ಹಣಕಾಸು ಅಧಿಕಾರಿಗಳಾದ ಪ್ರೊ ಎಸ್. ಬಿ. ಆಕಾಶ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವಿಶೇಷ ಅಧಿಕಾರಿಗಳಾದ ಡಾ. ಎಂ. ಜಯಪ್ಪ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ ಬಿ.ಕೆ. ರವಿ ಇವರು ಗೌರವ ಉಪಸ್ಥಿತಿ ಇರುವರು ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button