ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ನಿನ್ನೆ ಲೋಕಾಯುಕ್ತ ಪೊಲಿಸರು ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಕಾಲ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದರು. ಈ ವೇಳೆ ಆದಾಯಕ್ಕು ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ನಡೆಸಲಾಗಿದೆ.
ಅಜಿತ್ ರೈಗೆ ಸಂಬಂಧಿಸಿದ ಹತ್ತು ಕಡೆಗಳಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರುಗಳು, ಬೈಕ್, 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ