Uncategorized

*6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತಿದ್ದರೆ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆಯಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಇನ್ನು ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button