ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 11 ಜನರ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಒಟ್ಟು 11 ನಾಯಕರಿಗೆ ನೋಟಿಸ್ ನೀಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರು ಹಾಗೂ ಪಕ್ಷದ ಬಗ್ಗೆ ಬಹಿರಂಗ ಹೆಳಿಕೆಗಳನ್ನು ನೀಡಿದವರು ಸೇರಿ ಒಟ್ಟು 11 ಜನರ ವಿರುದ್ಧ ನೋಟಿಸ್ ನೀಡಲಾಗಿದೆ. ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇನ್ನು ಬಹಿರಂಗ ಹೇಳಿಕೆ ನೀಡಿದ ನಾಯಕರನ್ನು ಕರೆದು ಮಾತನಾಡಿದ್ದೇವೆ ಇನ್ಮುಂದೆ ಇಂತಹ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಕಾಂಗ್ರೆಸ್ ನಾಯಕರು ಜನರಿಗೆ ಕೊಟ್ಟ ಭರವಸೆಯಂತೆ 10 ಕೆಜಿ ಅಕ್ಕಿ ಕೊಡಬೇಕು. ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ