Belagavi NewsBelgaum NewsKannada NewsKarnataka NewsLatest

ಅಶಿಸ್ತಿನ ನಿರ್ಣಯಗಳಿಂದ ಜಲಾಶಯಗಳಲ್ಲಿ ನೀರಿನ ಕೊರತೆ: ಕೃಷ್ಣ ಭೈರೇಗೌಡ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂದಾಯ ಇಲಾಖೆಯ ಸಚಿವ ಕೃಷ್ಣ ಭೈರೇಗೌಡ ಅವರು ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿ ನಡೆಸಿದರು.

ಅವರು ತಿಳಿಸಿದ ಪ್ರಮುಖ ಅಂಶಗಳು

* ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ರಾಜ್ಯದ ಕೆಲವೆಡೆ ಮುಂಗಾರು ಚುರುಕಾಗಿದೆ.

* ಜಲಾಶಯಗಳಲ್ಲಿ ನೀರು ಕಡಿಮೆ ಇದ್ದರೂ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ.

* ನೀರಿನ ಸಮಸ್ಯೆ ಕಂಡುಬಂದ ಕಡೆಗಲ್ಲಿ 24 ಗಂಟೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಆದೇಶ ನೀಡಲಾಗಿದೆ.

* ಮುಂದಿನ ಹತ್ತು ದಿನಗಳಲ್ಲಿ ಮುಂಗಾರು ಸುಧಾರಣೆ ಆಶಾಭಾವನೆ

* ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಕಂದಾಯ ಪ್ರಕರಣಗಳನ್ನು 90 ದಿನಗಳಲ್ಲಿ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ.

* ಜಮೀನು ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ತಕರಾರರುಗಳಿದ್ದರೆ 90 ದಿನಗಳ ಕಾಲಮಿತಿಯಲ್ಲಿ ಬಗೆಹರಿಸಬೇಕು. ಈ ಕುರಿತು ಪ್ರತಿ ತಿಂಗಳು ಪರಿಶೀಲನೆ ನಡೆಸಲಾಗುವುದು.

* ಸಾರ್ವಜನಿಕರು ಜಿಲ್ಲಾಧಿಕಾರಿ, ತಹಶಿಲ್ದಾರರ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು.

* ಮೋಜಣಿ, ನೋಂದಣಾಧಿಕಾರಿಗಳಿಗೂ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಆಡಳಿತ ಸುಧಾರಣೆ ನಮ್ಮ ಆದ್ಯತೆಯಾಗಿದೆ.

* ಆಡಳಿತ ಸರಳೀಕರಣದ ಅಗತ್ಯವಿದೆ. ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ಸ್ವಯಂಚಾಲಿತವಾಗಿ ಆಗುವಂತಹ ಕೆಲಸಗಳ ಬಗ್ಗೆ ಅಧಿಕಾರಿಗಳ ಅಭಿಪ್ರಾಯಗಳನ್ನು ಸಭೆಯಲ್ಲಿ ಪಡೆಯಲಾಗಿದೆ.

ಕಾಯ್ದೆ-ಕಾನೂನು ಅಥವಾ ನಿಯಮಾವಳಿಗಳ ಸರಳೀಕರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು.

* ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಿಸಿದಂತೆ ಸೂಕ್ತ ನಿಗಾ ವಹಿಸಲು ಕೂಡ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

* ಬರಗಾಲ ಘೋಷಣೆ ಮಾಡುವಂತ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಜುಲೈ 10 ರ ಬಳಿಕ ಈ ಬಗ್ಗೆ ಪರಿಶೀಲಿಸಲಾಗುವುದು.

* ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

* 311 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಮತ್ತು 387 ಖಾಸಗಿ ಕೊಳವೆಬಾವಿಗಳ ಮೂಲಕವೂ ನೀರು ಪೂರೈಸಲಾಗುತ್ತಿದೆ.

* ಬಿತ್ತನೆ ಇನ್ನು ಮೇಲೆ ಚುರುಕುಗೊಳ್ಳಲಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ನಿಗಾ ವಹಿಸಲಾಗಿದೆ.

* ಬೆಳೆಹಾನಿ ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಜರುಗಿದ ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

* ಎಸ್.ಡಿ.ಆರ್.ಎಫ್ ಅಡಿಯಲ್ಲಿ ನೀಡಲಾಗುವ ಪರಿಹಾರ ಮೊತ್ತವನ್ನು ಹೆಚ್ಚಿಸುವ ಅಗತ್ಯತೆಯನ್ನು ಮನವರಿಕೆ ಮಾಡಲಾಗುವುದು.

* ಅತ್ಯುತ್ತಮ‌ ಮಳೆಯಾಗಿದ್ದರೂ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಲು ಕಾರಣವಾಗಿರುವ ಬಗ್ಗೆ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

* ಕೆಲ ಅಶಿಸ್ತಿನ ನಿರ್ಣಯಗಳಿಂದ ಜಲಾಶಯಗಳಲ್ಲಿ ನೀರಿನ ಕೊರತೆಗೆ ಕಾರಣವಾಗಿದೆ. ಆದ್ದರಿಂದ ಈ ಬಗ್ಗೆ ವರದಿ ಪಡೆದುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು.

* ಕುಡಿಯುವ ನೀರಿನ ಬಿಕ್ಕಟ್ಟು ಉದ್ಭವಿಸುವಂತಹ ಸ್ಥಿತಿಗೆ ಬರಬಾರದಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button