ಪ್ರಗತಿವಾಹಿನಿ ಸುದ್ದಿ, ಅಥಣಿ: ಕೃಷ್ಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ಮೇಲೆ ಅಥಣಿ ಪೊಲೀಸರು ದಾಳಿ ನಡೆಸಿದ್ದು, 27 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಇಲ್ಲಿ ಅಕ್ರಮ ಮರಳು ದಂದೆ ರಾಜಾರೋಷವಾಗಿ ನಡೆಯುತ್ತಿತ್ತು. ಸಾರ್ವಜನಿಕರಿಂದ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಪೊಲೀಸರು ಹಣ ಪಡೆದು ಅಕ್ರಮ ದಂದೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ ಎನ್ನುವ ಆರೋಪವಿತ್ತು.
ಭಾನುವಾರ ಬೆಳಗಿನ ಜಾವ ದಾಳಿ ನಡೆಸಲಾಗಿದ್ದು, 23 ಟ್ರ್ಯಾಕ್ಟರ್ ಮತ್ತು 4 ಜೆಸಿಬಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಕಡೆಯಿಂದ ರಸ್ತೆ ಮಾಡಿಕೊಂಡು ಮರಳು ಸಾಗಿಸಲಾಗುತ್ತಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ