Uncategorized

*ಭಾರಿ ಮಳೆ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಜುಲೈ 5ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 4, 5, 6ರಂದು ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾದು ಪ್ರದೇಶಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


Related Articles

Back to top button