Uncategorized

*ಭೀಕರ ಅಪಘಾತ; ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೀಕರ ಅಪಘಾತದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.

ದಿಶಾ (18) ಮೃತ ವಿದ್ಯಾರ್ಥಿನಿ. ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ತಂದೆ-ಮಗಳು ಇಬ್ಬರು ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಮಗಳು ದಿಶಾ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ತಂದೆಯನ್ನು ಆಸ್ಪತ್ರೆಗೆದಾಖಲಿಸಲಾಗಿದೆ. ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ದಿಶಾ, ಎಂದಿನಂತೆ ತಂದೆಯ ಜೊತೆ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆ ಅಪಘಾತ ಸಂಭವಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button