*ಆದಿವಾಸಿ ಸಮುದಾಯದ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಸಂತ್ರಸ್ತ ವ್ಯಕ್ತಿಯ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ*
ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಸಂತ್ರಸ್ತನ ಪಾದ ತೊಳೆದು, ಸನ್ಮಾನ ಮಾಡಿ ಗೌರವಿಸಿದ್ದಾರೆ.
ಭೋಪಾಲ್ ನ ತಮ್ಮ ನಿವಾಸಕ್ಕೆ ಬುಡಕಟ್ಟು ಸಮುದಾಯಯದ ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ನನ್ನು ಕರೆಸಿ, ಆತನ ಕಾಲು ತೊಳೆದು, ಶಾಲು ಹೊದಿಸಿ ಸನ್ಮಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಘಟನೆ ಬಗ್ಗೆ ವಿಡಿಯೋ ನೋಡಿ ತುಂಬಾ ದು:ಖವಾಯಿತು. ನಿಮ್ಮಲ್ಲಿ ಕ್ಷಮೆಯಾಚಿಸುವೆ ಎಂದು ಸಂತ್ರಸ್ತನಲ್ಲಿ ಕ್ಷಮೆ ಕೇಳಿದ್ದಾರೆ.
ಬುಡಕಟ್ಟು ಸಮುದಾಯದ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜನೆ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣ ಸಂಬಂಧ ಆರೋಪಿ ಪ್ರವೇಶ್ ಶುಕ್ಲಾನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಸರ್ಕಾರ ಆತನಿಗೆ ಸಂಬಂಧಿಸಿದ ಅಕ್ರಮ ಕಟ್ಟಡಗಳನ್ನು ಜೆಸಿಬಿ ಮೂಲಕ ನೆಲಸಮಗೊಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ