ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಜಮ್ಮು-ಕಾಶ್ಮೀರದಲ್ಲಿಯೂ ವರುಣಾರ್ಭಟ ಜೋರಾಗಿದ್ದು, ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ.
ಕಾಶ್ಮೀರ ಕಣಿವೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ವೈಫರಿತ್ಯದಿಂದಾಗಿ ಬಾಲ್ಚಾರ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗದಲ್ಲಿ ಇಂದು ಬೆಳಿಗ್ಗೆಯಿಂದ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾವುದೇ ಭಕ್ತರಿಗೆ ಪವಿತ್ರ ಗುಹುಯತ್ತ ಸಾಗಲು ಅವಕಾಶವಿಲ್ಲ.
ಸುಮಾರು 3200 ಯಾತ್ರಾರ್ಥಿಗಳಿಗೆ ನುನ್ವಾನ್ ಪಹಲ್ಗಾಮ್ ಶಿಬಿರದಲ್ಲಿ ಹಾಗೂ 4000 ಯಾತ್ರಾರ್ಥಿಗಳಿಗೆ ಬಾಲ್ಚಾಲ್ ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ನೀಡಲಾಗಿದೆ. ಹವಾಮಾನ ಸುಧಾರಿಸಿದ ಬಳಿಕ ಯಾತ್ರೆ ಪುನರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ