Kannada NewsKarnataka NewsLatest

*ಅನುದಾನ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಬಿಗ್ ಶಾಕ್; 8 ತಿಂಗಳು ಸಹಕರಿಸಿ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದು, ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಹಿನ್ನೆಲೆಯಲ್ಲಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಭರ್ಜರಿ ಅನುದಾನ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿ ಹೆಚ್ಚು ಅನುದಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

Home add -Advt

ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಿರುವುದರಿಂದ ಶಾಸಕರಿಗೆ ಹೆಚ್ಚಿನ ಅನುದಾನ ನೀಡಲಾಗುವುದಿಲ್ಲ. ಅನುದಾನ ವಿಚಾರವಾಗಿ ಶಾಸಕರು 8 ತಿಂಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.


Related Articles

Back to top button