Kannada NewsKarnataka NewsLatestUncategorized

*ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು ವಿಧನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 14ನೇ ಬಜೆಟ್ ಇದಾಗಿದ್ದು ಈ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿದ್ದರಾಮಯ್ಯ ಭಾಜನರಾಗಿದ್ದಾರೆ.

ಒಟ್ಟು 3 ಲಕ್ಷ 27 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸುತ್ತಿದ್ದಾರೆ. ರೈತ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ ಜಾರಿ. ಇದಕ್ಕಾಗಿ 10 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದಾರೆ.

ಬಜೆಟ್ ಪ್ರಮುಖಾಂಶಗಳು:
ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ ಅಡಿಯಲ್ಲಿ 100 ಕೋಟಿ
ಕೃಷಿ ಉದ್ಯಮ ಉತ್ತೇಜಿಸಲು ನವೋದ್ಯಮ ಯೋಜನೆಗೆ 10ಕೋಟಿ
ಚಿಕ್ಕಮಗಳೂರು ಕಾಫಿ ಉದ್ಯಮ ಉತ್ತೇಜನಕ್ಕೆ ಕ್ರಮ
ರಾಮನಗರ, ಶಿಡ್ಲಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
ಟ್ರಾಮಾ ಸೆಮ್ಟರ್ ಗೆ 30 ಕೋಟಿ ಅನುದಾನ
ನಮ್ಮ ಮೆಟ್ರೋಗೆ 30,000 ಕೋಟಿ ಅನುದಾನ

ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ
8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.

ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ
5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ. ದಿಂದ
45,000 ರೂ. ಗಳವರೆಗೆ ಹೆಚ್ಚಿಸಿ 4೭,2೭೨ ಶಾಲೆಗಳು ಹಾಗೂ
1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ
153 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ
1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ಗಳ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ʻಮರುಸಿಂಚನʼ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು.
ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುವ ಸ್ಯಾಟ್ಸ್ ತಂತ್ರಾಂಶವನ್ನು SATS 2.0 ಎಂದು ಉನ್ನತೀಕರಿಸಲಾಗುವುದು.

ಹೊಸ ಕಲ್ಪನೆಯನ್ನು ವಾಸ್ತವಕ್ಕೆ ತರಲು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್‌ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು.
2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ವಿನೂತನ
ʻಸಸ್ಯ ಶ್ಯಾಮಲʼ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಸಾರ್ವಜನಿಕ ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಖರೀದಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಉನ್ನತ ಶಿಕ್ಷಣ
ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು.

ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ಒದಗಿಸಲಾಗುವುದು.
ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿ…
ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ 224 ವಸತಿ ನಿಲಯಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗುವುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button