ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು.
ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ, ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ