Kannada NewsKarnataka NewsLatest
*ಭೀಕರ ಬೈಕ್ ಅಪಘಾತ; ಶಿಕ್ಷಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಬೈಕ್ ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದಲ್ಲಿ ನಡೆದಿದೆ.
45 ವರ್ಷದ ರವಿ ಮೃತ ಶಿಕ್ಷಕ. ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಗ್ರಾಮದ ಪರಿಣಿತ ವಿದ್ಯಾಸಂಸ್ಥೆಯ ಶಿಕ್ಷಕನಾಗಿದ್ದ ರವಿ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ನಿಂದ ಕೆಳಗೆ ಬಿದ್ದ ಶಿಕ್ಷಕ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಯಾರಾದರೂ ಆಸ್ಪತ್ರೆಗೆ ಕರೆದೊಯ್ಯುವಂತೆ ಕೇಳಿಕೊಂಡಿದ್ದಾರೆ. ಆದರೆ ಜನರು ಆಸ್ಪತ್ರೆಗೆ ಕರೆದೊಯ್ಯಲು ಹಿಂದೇಟು ಹಾಕಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕ ತೀವ್ರ ರಕ್ತಸ್ರಾವದಿಂದ ನರಳಾಡಿ ನಡುರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾರೆ.




