Kannada NewsKarnataka NewsLatestPolitics

*ಬಿಜೆಪಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಲವಾರು ಕಾಮಗಾರಿಗಳಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Home add -Advt

ಸಿ.ಸಿ.ಪಾಟೀಲರು ತಮ್ಮ ಬಜೆಟ್ ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಯಾಕೆ ಹೆಚ್ಚು ಖರ್ಚು ಮಾಡಿದರು, ಗೊತ್ತಲ್ಲ ಎಂದು ಟಾಂಗ್ ನೀಡಿದ್ದಾರೆ.

ನೀರಾವರಿ ಇಲಾಖೆಯಲ್ಲಿ 10-15 ಸಾವಿರ ಕೋಟಿ ಹೆಚ್ಚು ಖರ್ಚು ಮಾಡಿದ್ದಾರೆ. ಬಜೆಟ್ ಗಿಂತ ಯಾಕೆ ಹೆಚ್ಚು ಖರ್ಚು ಮಾಡಿದ್ದೀರಿ? ಜನರನ್ನು ಯಾಕೆ ಮೋಸ ಮಾಡಿದ್ದೀರಿ? ಇದರ ಹಿಂದಿನ ಉದ್ದೇಶವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

ಬಿಬಿಎಂಪಿಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ. ಲೂಟಿ ಹೊಡೆಯಲು ಬಜೆಟ್ ಗಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದಾರೆ. ಬಜೆಟ್ ಗಿಂತ ಹೆಚ್ಚು ಖರ್ಚು ಮಾಡುವಾಗ ನಿಮ್ಮ ಶಿಸ್ತು ಎಲ್ಲಿತ್ತು? ಎಂದು ಪ್ರಶ್ನಿಸಿದ್ದಾರೆ.

Related Articles

Back to top button