Kannada NewsKarnataka NewsLatestUncategorized

*ಅನ್ನಭಾಗ್ಯ ಯೋಜನೆಗೆ ದಶಕದ ಸಂಭ್ರಮ; ಫಲಾನುಭವಿಗಳ ಖಾತೆಗೆ ಇಂದು ಹೆಚ್ಚುವರಿ ಅಕ್ಕಿ ಹಣ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಅನ್ನಭಾಗ್ಯ ಯೋಜನೆಗೆ ಇಂದು ದಶಕದ ಸಂಭ್ರಮ ಈ ಸಂದರ್ಭದಲ್ಲೇ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಯಲ್ಲಿ ಒಂದಾದ 10 ಕೆಜಿ ಉಚಿತ ಅಕ್ಕಿಯ ಹಣವನ್ನು ಇಂದು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ.

ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 2013ರ ಮೇ 13ರಂದು ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ಘೋಷಿಸಿದರು. ಬಳಿಕ ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಯಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಲಾಭ ಪಡೆಯುತ್ತಿವೆ.

ಈದೀಗ ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ 10ಕೆಜಿ ಉಚಿತ ಅಕ್ಕಿ ಘೋಷಿಸಿದೆ. 5ಕೆಜಿ ಹೆಚ್ಚುವರಿ ಅಕ್ಕಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ, ಹೆಚ್ಚುವರಿ ಅಕ್ಕಿ ಸಿಗುವವರೆಗೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದ್ದಾರೆ. ಅನ್ನಭಾಗ್ಯ ಯೋಜನೆಯ ದಶಕದ ಸಂಭ್ರಮದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ.

Home add -Advt

Related Articles

Back to top button