Kannada NewsKarnataka NewsLatest

*ವಿಧಾನಸೌಧ ಭದ್ರತಾ ಪರಿಶೀಲನೆ ವೇಳೆ ಮಹಿಳೆ ಬಳಿ ಚಾಕು ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದಲ್ಲಿ ಭದ್ರತಾ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿರುವ ಘಟನೆ ನಡೆದಿದೆ.

ವಿಧಾನಸೌಧ ಪೂರ್ವ ಗೇಟ್ ಬಳಿ ಭದ್ರತಾ ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಚಾಕು ವಶಕ್ಕೆ ಪಡೆದ ಪೊಲೀಸರು ಮಹಿಳೆಯನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ವಿಧಾನಸೌಧದ ಸಿಬ್ಬಂದಿ ಎಂದು ಹೇಳಲಾಗುತ್ತಿದೆ.

ಶುಕ್ರವಾರ ನಡೆದ ಬಜೆಟ್ ಮಂಡನೆ ವೇಳೆ ಅನಾಮಿಕ ವ್ಯಕ್ತಿಯೊಬ್ಬರು ವಿಧಾನಸಭೆಗೆ ಪ್ರವೇಶಿಸಿ ಶಾಸಕರ ಸೀಟ್ ನಲ್ಲಿ ಕುಳಿತಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಪ್ರತಿಯೊಬ್ಬರನ್ನು ತೀವ್ರ ತಪಾಸಣೆ ನಡೆಸಲಾಗಿದೆ.

Related Articles

Back to top button