Kannada NewsKarnataka NewsLatestPolitics

*ಜೈನಮುನಿ ಹತ್ಯೆ ಪ್ರಕರಣ; ಸಿಬಿಐಗೆ ವಹಿಸಿ; ಶಾಸಕ ಅಭಯ್ ಪಾಟೀಲ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಜರ ಹತ್ಯೆ ಪ್ರಕರಣ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಶಾಸಕ ಅಭಯ್ ಪಾಟೀಲ್, ಜೈನಮುನಿ ಹತ್ಯೆ ಪ್ರಕರಣ ಖಂಡನೀಯ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

Home add -Advt

ಜೈನಮುನಿಗಳ ಕೊಲೆ ಹಲವು ಸಂಶಯಕ್ಕೆ ಕಾರಣವಾಗಿದೆ. ತನಿಖೆ ಪೂರ್ಣಗೊಳ್ಳುವ ಮೊದಲೇ ಮಾಹಿತಿ ಸೋರಿಕೆಯಾಗಿದೆ. ಪ್ರಕರಣದ ಮೊದಲ ಆರೋಪಿ ಹೆಸರನ್ನು ಮಾತ್ರ ಹೇಳುತ್ತಿದ್ದಾರೆ. ಎರಡನೇ ಆರೋಪಿ ಹೆಸರು ಹೇಳಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಅಲ್ಲದೇ ತನಿಖೆಯ ವಿಚಾರದಲ್ಲಿ ಒತ್ತಡವಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಆರೊಪಿಸಿದರು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಹೇಳಿದರು.

Related Articles

Back to top button