Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಘಟಪ್ರಭಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಬೈಕ್ ಸವಾರರು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಘಟಪ್ರಭಾ ನದಿಯ ರಭಸಕ್ಕೆ ಬೈಕ್ ಸವಾರರಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ಘಟಪ್ರಭಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ಅವರಾದಿ ಗ್ರಾಮದ ಚೆನ್ನಪ್ಪ (39) ಹಾಗೂ ದುರ್ಗವ್ವ (33) ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಚೆನ್ನಪ್ಪ ಹಾಗೂ ದುರ್ಗವ್ವಗಾಗಿ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದ್ದಾರೆ. ರಾತ್ರಿಯವರೆಗೂ ಅವರ ಪತ್ತೆಯಾಗಿಲ್ಲ. ನಾಳೆ ಶೋಧ ಮುಂದುವರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


Related Articles

Back to top button