Karnataka NewsLatest

ಮಹಿಳೆಯರು ಓದಲೇಬೇಕಾದ ಸುದ್ದಿಗಳು

ಮಹಿಳೆಯರು ಓದಲೇಬೇಕಾದ ಸುದ್ದಿಗಳು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ವಿವಿಧ ಸೌಲಭ್ಯಗಳನ್ನು ಪಡೆಯುವುದಕ್ಕಾಗಿ ಮಹಿಳೆಯರು, ಮಹಿಳಾ ಸಂಘಟನೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದೊರೆಯುವ ಸೌಲಭ್ಯಗಳು, ಅದಕ್ಕೆ ಬೇಕಾದ ಅರ್ಹತೆಗಳು ಎಲ್ಲ ವಿವರಗಳೂ ಇಲ್ಲಿವೆ –

 

  1. ಬಡ್ಡಿ ರಹಿತ ಸಾಲ: ಸ್ತ್ರೀ ಶಕ್ತಿ ಸಂಘಗಳಿಂದ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದಿಂದ ಮಂಜೂರಾಗಿರುವ ೨೦೧೯-೨೦ ನೇ ಸಾಲಿನ ಕಿರುಸಾಲ ಯೋಜನೆಯಡಿ ಸ್ತ್ರೀ ಶಕ್ತಿ ಸಂಘಗಳಿಗೆ ರೂ.೨ ಲಕ್ಷಗಳ ಸಾಲವನ್ನು ಬಡ್ಡಿ ರಹಿತ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಸ್ತ್ರೀ ಶಕ್ತಿ ಗುಂಪುಗಳು ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು, ಗುಂಪಿನ ಸದಸ್ಯರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು, ಗುಂಪು ಬೇರೆ ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕುಗಳಲ್ಲಿ ಸಾಲಗಾರರಾಗಿರಬಾರದು, ಈಗಾಗಲೇ ಕಿರುಸಾಲ ಯೋಜನೆಯಡಿ ಪ್ರಯೋಜನೆ ಪಡೆಯದೇ ಇರುವ ಸಂಘಗಳು ಮಾತ್ರ ಸಾಲ ಪಡೆಯಲು ಅರ್ಹರಾಗಿರುತ್ತಾರೆ, ಸ್ತ್ರೀ ಶಕ್ತಿ ಗುಂಪು ಆರ್ಥಿಕವಾಗಿ ಸದೃಡವಾಗಿದ್ದು, ಗುಂಪಿನ ಉಳಿತಾಯ ಗರಿಷ್ಠ ರೂ.೨.೦೦ ಲಕ್ಷಗಳಿಗೂ ಮೇಲಿರಬೇಕು.

ದಾಖಲಾತಿಗಳು:
ಸಾಲ ಪಡೆಯಲು ನಿಗಮಕ್ಕೆ ಸಲ್ಲಿಸಬೇಕಾದ ಸಾಲದ ಅರ್ಜಿ, ಗ್ರೇಡಿಂಗ್ ಮಾಡಿರುವ ದಾಖಲೆಗಳನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ದೃಡೀಕರಿಸಿ ನೀಡುವುದು, ಸದಸ್ಯರೆಲ್ಲರು ಸಹಿ ಮಾಡಿರುವ ರೂ.೫೦ ಛಾಪಾ ಕಾಗದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು ಮತ್ತು ಅದರ ಐ.ಎಫ್.ಎಸ್.ಸಿ ಕೋಡ್ ದಾಖಲೆ, ಸಾಲ ಪಡೆಯಲು ಉದ್ದೇಶಿಸಿದ ಉತ್ಪಾದನಾ ಘಟಕದ ಯೋಜನಾ ವರದಿ ಅದರಲ್ಲಿ ಘಟಕದ ಸ್ಥಿರ ಮತ್ತು ಚರಾಸ್ತಿಯ ಸಂಪೂರ್ಣ ವಿವರ ಮತ್ತು ಘಟಕದ ಉತ್ಪಾದನಾ ಸಾಮರ್ಥ್ಯದಿಂದ ಗುಂಪು ಮಾಸಿಕವಾಗಿ ಗಳಿಸುವ ನಿವ್ವಳ ಲಾಭದ ವಿವರ ಹೊಂದಿರಬೇಕು.
ಕಿರುಸಾಲ ಯೋಜನೆಯಡಿ ನಿಗದಿತ ಅರ್ಜಿ ನಮೂನೆಗಳನ್ನು ಪ್ರತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಅಗಸ್ಟ್ ೧೩ ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ ಎಂದು ಬೆಳಗಾವಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2. ಮಹಿಳಾ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

 

೨೦೧೯-೨೦ ನೇ ಸಾಲಿನಲ್ಲಿ ಸಮೃದ್ಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದಿಂದ ಆರ್ಥಿಕವಾಗಿ ಹಿಂದುಳಿದ ಬೀದಿ ಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲಿಕರಣಕ್ಕಾಗಿ ರೂ. ೧೦,೦೦೦ ಗಳ ಪ್ರೋತ್ಸಾಹಧನ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು :
೧೮ ರಿಂದ ೬೦ ವರ್ಷ ವಯೋಮಿತಿಯಲ್ಲಿರಬೇಕು, ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತಿಗಳಲ್ಲಿ ಪೌರಾಡಳಿತ ಇಲಾಖೆಯಲ್ಲಿ ಮತ್ತು ಬೆಂಗಳೂರು ನಗರ ಪ್ರದೇಶಕ್ಕೆ ಸಂಬಂಧಿಸಿದಂತೆ ಬೃಹತ್ ಮಹಾನಗರ ಪಾಲಿಕೆಯಲ್ಲಿ ಬೀದಿ ಬದಿ ವ್ಯಾಪಾರಿ ಎಂದು ನೊಂದಣಿ ಮಾಡಿಸಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು, ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಅವರಿಂದ ಬೀದಿಬದಿ ವ್ಯಾಪಾರಿ ಎಂದು ದೃಡೀಕರಿಸಿದ ದಾಖಲೆಯನ್ನು ಪಡೆದಿರಬೇಕು, ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಬಿ.ಪಿ.ಎಲ್ ಕಾರ್ಡ್‌ಗಳನ್ನು ಕಡ್ಡಾಯವಾಗಿ ಹೊಂದಿರಬೇಕು, ರಾಷ್ಟ್ರಿಕೃತ ಬ್ಯಾಂಕ್‌ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು, ಒಬ್ಬ ಫಲಾನುಭವಿ ಕೇವಲ ಒಂದು ಬಾರಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ದಾಖಲಾತಿಗಳು :
ಪ್ರೋತ್ಸಾಹಧನ ಪಡೆಯಲು ನಿಗಮಕ್ಕೆ ಸಲ್ಲಿಸಬೇಕಾದ ಅರ್ಜಿ, ಅರ್ಜಿದಾರಳ ೪ ಭಾವಚಿತ್ರಗಳು, ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು ಮತ್ತು ಶಾಖೆಯ ಹೆಸರು ಹಾಗೂ ಅದರ ಐಎಫ್‌ಎಸ್‌ಸಿ ಕೋಡ್ ದಾಖಲೆ, ಅರ್ಜಿದಾರಳ ವಯಸ್ಸು ದೃಢೀಕರಿಸುವ ದಾಖಲೆ, ಕುಟುಂಬದ ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ ಹಾಗೂ ಫಲಾನುಭವಿಯ ಆಧಾರ ಕಾರ್ಡ್, ಬೀದಿಬದಿ ವ್ಯಾಪಾರಿ ಎಂದು ಪೌರಾಡಳಿತ ಇಲಾಖೆಯಿಂದ ಪಡೆದ ಗುರುತಿನ ಚೀಟಿ, ಬೆಂಗಳೂರು ನಗರದಲ್ಲಿ ಬಿ.ಬಿ.ಎಂ.ಪಿ ಅವರಿಂದ ಪಡೆದ ಗುರುತಿನ ಚೀಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ದೃಢೀಕರಿಸಿ ನೀಡಿರುವ ಪತ್ರ., ಈಗಾಗಲೇ ಬೀದಿಬದಿ ವ್ಯಾಪಾರ ಮಾಡುತ್ತೀರುವ ಸ್ಥಳದ ಭಾವಚಿತ್ರ (ಫಲಾನುಭವಿಯನ್ನೋಳಗೊಂಡಂತೆ).
ನಿಗದಿತ ಅರ್ಜಿ ನಮೂನೆಗಳನ್ನು ಪ್ರತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಯಿಂದ ಪಡೆದು ಅಗಸ್ಟ್ ೧೩ ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸತಕ್ಕದ್ದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ ಎಂದು ಬೆಳಗಾವಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

3. ಎಚ್.ಐ.ವಿ ಪೀಡಿತ, ಸೋಂಕಿತ ಮಹಿಳೆಯರಿಂದ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದಿಂದ ಮಂಜೂರಾಗಿರುವ ಧನಶ್ರೀ ಯೋಜನೆಯಡಿ ಎಚ್.ಐ.ವಿ ಪೀಡಿತ, ಸೋಂಕಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಆರ್ಥಿಕವಾಗಿ ಸಮೃದ್ಧಿ ಹೊಂದಲು ರೂ. ೨೫,೦೦೦ಗಳ ನಿಗಮದಿಂದ ನೇರ ಸಾಲ ಹಾಗೂ ರೂ.೨೫,೦೦೦ ಗಳ ಸಹಾಯಧನ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಅರ್ಜಿದಾರಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು, ಅರ್ಜಿದಾರಳು ೧೮ ರಿಂದ ೬೦ ವರ್ಷದೊಳಗಿರಬೇಕು, ಅರ್ಜಿದಾರಳು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು, ಅರ್ಜಿದಾರಳು ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕುಗಳಲ್ಲಿ ಸಾಲದಾರರಾಗಿರಬಾರದು, ಕುಟುಂಬದಲ್ಲಿ ಹೆಚ್.ಐ.ವಿ.ಸೋಂಕಿತ ಒಬ್ಬ ಮಹಿಳೆಗೆ ಮಾತ್ರ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ, ಅರ್ಜಿದಾರಳು ಹೆಚ್.ಐ.ವಿ. ಸೋಂಕಿತ ಕುರಿತು ಜಿಲ್ಲೆ, ತಾಲ್ಲೂಕು ಹತ್ತಿರದ ಆರೋಗ್ಯ ಕೇಂದ್ರದಲ್ಲಿನ ಐ.ಸಿ.ಟಿ.ಸಿ. ಕೇಂದ್ರದ ವೈದ್ಯಕೀಯ ವರದಿಯನ್ನು ಹೊಂದಿರಬೇಕು, ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು,

ದಾಖಲಾತಿಗಳು:
ಸಾಲ ಪಡೆಯಲು ನಿಗಮಕ್ಕೆ ಸಲ್ಲಿಸಬೇಕಾದ ಸಾಲ ಮತ್ತು ಸಹಾಯಧನದ ಅಜಿ, ಅರ್ಜಿದಾರಳ ೪ ಭಾವಚಿತ್ರಗಳು, ವಿಳಾಸದ ದೃಢೀಕರಣ ದಾಖಲೆಗಳು (ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್, ಪಡಿತರಚೀಟಿ, ಯಾವುದಾದರೊಂದು ದಾಖಲೆ ಸಲ್ಲಿಸುವುದು, ಅರ್ಜಿದಾರಳು ಮತ್ತು ನಿಗಮದೊಂದಿಗೆ ಸಾಲದ ಕುರಿತಾಗಿ ಮಾಡಿಕೊಳ್ಳುವ ಒಪ್ಪಂದದ ಪತ್ರ (ರೂ.೨೦ ಛಾಪಾಕಾಗದದಲ್ಲಿ), ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು, ಐ.ಎಫ್.ಎಸ್.ಸಿ. ಕೋಡ್‌ನ ದಾಖಲೆ, ಆಧಾರ್ ಕಾರ್ಡ್ ನಕಲು ಪ್ರತಿ, ಕುಟುಂಬದ ಬಿ.ಪಿ.ಎಲ್. ಕಾರ್ಡ್‌ನ ನಕಲು ಪ್ರತಿ, ಸಾಲ ಪಡೆಯಲು ಉದ್ದೇಶಿಸಿದ ಆದಾಯೋತ್ಪನ್ನ ಚಟುವಟಿಕೆಯ ಯೋಜನಾ ವರದಿ, ಬೇರೆಯಾವುದೇ ಆರ್ಥಿಕ ಸಂಸ್ಥೆ ಅಥವಾ ಬ್ಯಾಂಕುಗಳಿಂದ ಸಾಲ ಪಡೆದಿಲ್ಲ ಎಂಬ ಬಗ್ಗೆ ದೃಢೀಕರಣ ಪತ್ರ, ಐ.ಸಿ.ಟಿ.ಸಿ., ಪಿ.ಪಿ.ಟಿ.ಸಿ.ಟಿ. ಕೇಂದ್ರಗಳಲ್ಲಿ ಪಡೆದ ಹೆಚ್.ಐ.ವಿ. ಸೋಂಕು ಇರುವ ಸಂಬಂಧ ವೈದ್ಯಕೀಯ ವರದಿಯ ನಕಲು ಪ್ರತಿ.
ನಿಗದಿತ ಅರ್ಜಿ ನಮೂನೆಗಳನ್ನು ಪ್ರತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಯಿಂದ ಪಡೆದು ದ್ವಿಪ್ರತಿಯಲ್ಲಿ ಅಗಸ್ಟ್ ೧೩ ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸತಕ್ಕದ್ದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ ಎಂದು ಬೆಳಗಾವಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

4. ಸಾಲ/ಸಹಾಯಧನ: ಮಹಿಳೆಯರಿಂದ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದಿಂದ ಮಂಜೂರಾಗಿರುವ ಉದ್ಯೋಗಿನಿ ಯೋಜನೆಯಡಿ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗಿನಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಯೋಜನಾ ವೆಚ್ಚ ಕನಿಷ್ಠ ರೂ.೧ ಲಕ್ಷದಿಂದ ರೂ.೩ ಲಕ್ಷಗಳಿಗೆ ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ.೫೦ ರಷ್ಟಕ್ಕೆ ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ರೂ.೨ ಲಕ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿರುತ್ತದೆ. ವಿಶೇಷ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ಯೋಜನಾ ವೆಚ್ಚ ಕನಿಷ್ಠ ರೂ.೧ ಲಕ್ಷದಿಂದ ರೂ.೩ ಲಕ್ಷಗಳಿಗೆ ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ. ೩೦ ರಷ್ಟಕ್ಕೆ ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ರೂ.೧.೫೦ ಲಕ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿರುತ್ತದೆ. ವಯೋಮಿತಿಯನ್ನು ಎಲ್ಲಾ ವರ್ಗದವರಿಗೂ ೪೫ ವರ್ಷದಿಂದ ೫೫ ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿರುತ್ತಾರೆ.

ಅರ್ಹತೆಗಳು:
ಅರ್ಜಿದಾರಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು, ಅರ್ಜಿದಾರಳು ೧೮ ರಿಂದ ೫೫ ವರ್ಷದೊಳಗಿರಬೇಕು, ಅರ್ಜಿದಾರಳು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು, ಅರ್ಜಿದಾರಳು ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕುಗಳಲ್ಲಿ ಸಾಲದಾರರಾಗಿರಬಾರದು, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು.
ದಾಖಲಾತಿಗಳು:
ಸಾಲ ಪಡೆಯಲು ನಿಗಮಕ್ಕೆ ಸಲ್ಲಿಸಬೇಕಾದ ಸಾಲ ಮತ್ತು ಸಹಾಯಧನದ ಅರ್ಜಿ, ಅರ್ಜಿದಾರಳ ೪ ಭಾವಚಿತ್ರಗಳು, ವಿಳಾಸದ ದೃಢೀಕರಣ ದಾಖಲೆಗಳು (ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್, ಪಡಿತರಚೀಟಿ, ಯಾವುದಾದರೊಂದು ದಾಖಲೆ ಸಲ್ಲಿಸುವುದು, ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು, ಐ.ಎಫ್.ಎಸ್.ಸಿ. ಕೋಡ್‌ನ ದಾಖಲೆ, ಆಧಾರ್ ಕಾರ್ಡ್ ನಕಲು ಪ್ರತಿ, ಕುಟುಂಬದ ಬಿ.ಪಿ.ಎಲ್. ಕಾರ್ಡ್‌ನ ನಕಲು ಪ್ರತಿ, ಸಾಲ ಪಡೆಯಲು ಉದ್ದೇಶಿಸಿದ ಆದಾಯೋತ್ಪನ್ನ ಚಟುವಟಿಕೆಯ ಯೋಜನಾ ವರದಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು, ಬ್ಯಾಂಕಿನಿಂದ ಪಡೆದಿರುವ ಸಾಲ ಮಂಜೂರಾತಿ ಪತ್ರ.
ನಿಗದಿತ ಅರ್ಜಿ ನಮೂನೆಗಳನ್ನು ಪ್ರತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಯಿಂದ ಪಡೆದು ದ್ವಿಪ್ರತಿಯಲ್ಲಿ ಅಗಸ್ಟ್ ೧೩ ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸತಕ್ಕದ್ದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ ಎಂದು ಬೆಳಗಾವಿ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button