*ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬಸ್ ಗಳು ರಶ್; ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಬಸ್ ಮೇಲೆ ಕಲ್ಲು ತೂರಾಟ*
ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಸರಕಾರಿ ಬಸ್ ಗಳಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ಮಹಿಳೆಯರೇ ತುಂಬಿತುಳುಕುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ತೆರಳು ವಿದ್ಯಾರ್ಥಿಗಳಿಗೆ ಬಸ್ ಸಿಗದ ಸ್ಥಿತಿ ನಿರ್ಮಾಣವಾಗಿದೆ.
ಇದರಿಂದಾಗಿ ಬೇಸತ್ತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ಲಿಸದೇ ಹೋಗಿದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಶಾಲಾ-ಕಾಲೇಜಿಗೆ ತೆರಳಲು ಬಸ್ ಗಾಗಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಕಲಬುರ್ಗಿ ಕಡೆಯಿಂದ ಯಾದಗಿರಿ ಕಡೆ ತೆರಳುತ್ತಿದ್ದ ಬಸ್ ನಿಲ್ಲಿಸಿಲ್ಲ. ವಿದ್ಯಾರ್ಥಿಗಳು ಬಸ್ ನಿಲ್ಲಿಸಲು ಕೈಬೀಸಿದರೇ ಚಾಲಕ ಬಸ್ ನಿಲ್ಲಿಸದೇ ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ಮೇಲೆ ಕಲ್ಲು ತೂರಿದ್ದಾರೆ. ಬಸ್ ನ ಗಾಜುಗಳು ಪುಡಿ ಪುಡಿಯಾಗಿವೆ.
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಮಹಿಳೆಯರ ಉಚಿತ ಪ್ರಯಾಣ ಹೆಚ್ಚಿದ್ದು, ಬಸ್ ರಶ್ ನಿಂದಾಗಿ ಸ್ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ