ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ದೇಶದಲ್ಲೇ ಮಹಿಳಾ ಸಬಲೀಕರಣದ ಮೊದಲ ಯೋಜನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಯೋಜನೆಗೆ ವರ್ಷಕ್ಕೆ 30 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಆಗಸ್ಟ್ 16 ರಿಂದ ಮನೆಯ ಯಜಮಾನಿ ಖಾತೆಗೆ 2000 ರೂ. ನೀಡಲಾಗುವುದ . ಈ ವರ್ಷದ ಉಳಿದ ಅವಧಿಗೆ 17 ರಿಂದ 18 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದರು.
ಗೃಹಲಕ್ಷ್ಮೀ ಯೋಜನೆಯಲ್ಲಿಯೂ ಅತ್ತೆಗೋ , ಸೊಸೆಗೋ ಎಂದು ಬಿಜೆಪಿಯವರು ವ್ಯಂಗ್ಯವಾಡಿದರು. 1 ಕೋಟಿ 30 ಲಕ್ಷ ಕುಟುಂಬಗಳಿಗೆ ಈ ಯೋಜನೆಯಿಂದ ಲಾಭವಾಗಲಿದೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆಯಾಗಿದೆ ಎಂದರು.
ಗ್ಯಾಸ್ ಬೆಲೆ, ತೊಗರಿಬೇಳೆ, ಪೆಟ್ರೋಲ್, ಡೀಸೆಲ್, ಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಜೇಬಿಗೆ ದುಡ್ಡು ನೀಡುತ್ತಿರುವುದು ಒಳ್ಳೆಯ ಕಾರ್ಯಕ್ರಮವಲ್ಲವೇ ? . ಇದನ್ನೇ Universal Basic income ಎನ್ನುವುದು. ಇಷ್ಟರಮಟ್ಟಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿರುವಾಗ ಈ ಯೋಜನೆಯ ಹಿಂದಿನ ಸರ್ಕಾರದ ಉದ್ದೇಶವೇನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ