*ಗೃಹಲಕ್ಷ್ಮೀ ಯೋಜನೆ ಬಗ್ಗೆ ಗೊಂದಲಗಳಿದ್ದರೆ ಈ ಸಂಖ್ಯೆಗೆ ಸಂಪರ್ಕಿಸಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮನೆ ಯಜಮಾನಿ ಖಾತೆಗೆ 2000 ರೂ ಮಾಸಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19ರಿಂದ ಆರಂಭವಾಗಲಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಕರ್ನಾಟಕ ಒನ್, ಗ್ರಾಮ್ ಒನ್, ಬಾಪೂಜಿಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡುವ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಗಳ ಆಧಾರ್ ಸಂಖ್ಯೆ ಜೋಡಣೆಯಾದ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗುವುದು. ಬೇರೆ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಣ ವರ್ಗವಣೆಯಾಗುತ್ತದೆ. ಯಾವುದೇ ಶುಲ್ಕ, ಅಂತಿಮ ದಿನಾಂಕವಿರುವುದಿಲ್ಲ ಎಂದು ತಿಳಿಸಿದರು.
ಫಲಾನುಭವಿಯು ನೊಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಗೆ 1902 ಸಂಖ್ಯೆಗೆ ಕರೆ ಮಾಡಿ. ಇಲ್ಲವೇ 8147500500 ಸಂಖ್ಯೆಗೆ ಸಂದೇಶ ಅಥವಾ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ನಿಗದಿಪಡಿಸಿದ ದಿನಾಂಕದಂದು ನೋಂದಣಿಗೆ ಹೋಗಲು ಸಾಧ್ಯವಾಗದಿದ್ದರೆ ಅದೇ ಸೇವಾ ಕೇಂದ್ರಗಳಿಗೆ ಯಾವುದೇ ದಿನಾಂಕದಂದು ಸಂಜೆ 5ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ