Kannada NewsKarnataka NewsLatest
*ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಚಿರತೆ ದಾಳಿಯಿಂದ ಗಂಭೀರವಗೈ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಹನೂರು ತಾಲೂಕಿನ ಕಗ್ಗಲಿಗುಂದಿಯಲ್ಲಿ ನಡೆದಿದೆ.
6 ವರ್ಷದ ಸುಶೀಲ ಮೃತ ಬಾಲಕಿ. ಮನೆಯಿಂದ ಬಾಲಕಿ ಹೊರಗೆ ಬಂದಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿ ಎಳೆದೊಯ್ಯಲು ಯತ್ನಿಸಿತ್ತು. ಮನೆಯವರು ಬಾಲಕಿ ಚೀರಾಟ ಕೇಳಿ ಹೊರ ಬಂದು ಕೂಗಿಕೊಳ್ಳುತ್ತಿದ್ದಂತೆ ಚಿರತೆ ಓಡಿಹೋಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.
ಇದೇ ವೇಳೆ ಚಿರತೆ ದಾಳಿಯಿಂದ ಮೃತಪಟ್ಟ ಬಾಲಕಿ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ 15 ಲಕ್ಷ ಪರಿಹಾರ ಘೋಷಿಸಿದ್ದಾರೆ.




