ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಜೊತೆ ಬಿರುಗಾಳಿ ಕೂಡ ಬೀಸುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ.
ಇನ್ನು ಬೆಳಗಾವಿ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಜುಲೈ 19 ಹಾಗೂ 20ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ