ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಎಕ್ಸ್ ಪ್ರೆಸ್ ವೇ ನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು, ಹೆದ್ದಾರಿ ಸುರಕ್ಷತೆ ಬಗ್ಗೆ ಅಧ್ಯಯನ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಮಿತಿ ರಚನೆ ಮಾಡಿದೆ.
ಮೂವರು ತಜ್ಞರನ್ನು ಒಳಗೊಂಡಿರುವ ಸಮಿತಿಯನ್ನು ರಚಿಸಲಾಗಿದ್ದು, ಜಿಲೈ 20ರೊಳಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದೆ.
ರಸ್ತೆ ಸುರಕ್ಷೆಯ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್ ಹೆಚ್ ಎ ನ ಪ್ರವೀಣ್ ಕುಮಾರ್, ಜೈವರ್ಧನ್ ಸಿಂಗ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, 10 ದಿನಗಳಲ್ಲಿ ವರದಿ ನೀಡುವಂತೆ ತಿಳಿಸಿದೆ.
ಈ ಸಮಿತಿಯ ತಜ್ಞರು ಹೆದ್ದಾರಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ