ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕರಾವಳಿ ಜಿಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಬಿರುಗಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗಂಟೆಗೆ 40-45 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮುಂಜಾನೆಯಿಂದ ಬಿರುಗಾಳಿ ಮಳೆಯಾಗುತ್ತಿದ್ದು, ಬೃಹತ್ ಮರಗಳು ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ