Kannada NewsKarnataka NewsLatest

*ಕೇರಳ ಮಾಜಿ ಸಿಎಂ ಅಂತಿಮ ದರ್ಶನ ಪಡೆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇರಳ ಮಾಜಿ ಸಿಎಂ ಉಮನ್ ಚಾಂಡಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಓಮನ್ ಚಾಂಡಿ ಅಂತಿಮ ದರ್ಶನ ಪಡೆದರು.

ಕೇರಳ ಮಾಜಿ ಸಿಎಂ ಓಮನ್ ಚಾಂಡಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಬೆಂಗಳೂರಿನ ಇಂದಿರಾನಗರದಲ್ಲಿ ಇಡಲಾಗಿದೆ.

Home add -Advt

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಓಮನ್ ಚಾಂಡಿ ಅವರ ಅಂತಿಮದರ್ಶನ ಪಡೆದು ನಮನ ಸಲ್ಲಿಸಿದರು. ಓಮನ್ ಚಂಡಿ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

Related Articles

Back to top button