Kannada NewsKarnataka NewsLatest

*ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ; ಓರ್ವ ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಮ್ಕಿತ ಉಗ್ರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶಿರ್, ಜಾಹಿದ್ ಎಂದು ಗುರುತಿಸಲಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ವಿಧ್ವಂಸಕ ಕೃತ್ಯಕ್ಕೆ ಶಂಕಿತರು ಸಂಚು ರೂಪಿಸಿದ್ದರು. ಬಂಧಿತರಲ್ಲಿ ಓರ್ವ ಆರೋಪಿ ಜುನೇದ್ ಎಸ್ಕೇಪ್ ಆಗಿದ್ದಾನೆ.

2017ರ ಅಕ್ಟೋಬರ್ ನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಪರಪ್ಪನ ಅಗ್ರಹಾರ ಜೈಲಿನಿಂದಲೇ ಕೊಲೆ ಆರೋಪಿಗಳು ಉಗ್ರರ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಐವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 7 ಪಿಸ್ತೂಲ್, ಮದ್ದುಗುಂಡುಗಳು, 2 ಡ್ರಾಗರ್, ಅಮೋನಿಯಾ, 2 ಸ್ಯಾಟಲೈಟ್ ಫೋನ್, 4 ವಾಕಿಟಾಕ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿರುದ್ಧ ಯುಎಪಿಎ, ಶಸ್ತ್ರಾಸ್ತ್ರ ನಿಗ್ರಹ ಕಾಯ್ದೆ ಸೇರಿ ಹಲವು ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button