ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆ ನೊಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹಲವು ಸಚಿವರು, ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವೇಳೆ ಸಾಂಕೇತಿಕವಾಗಿ ಮೂವರು ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ನೊಂದಣಿ ಅರ್ಜಿ ವಿತರಿಸಲಾಯಿತು.
ಗೃಹಲಕ್ಷ್ಮೀ ಯೋಜನೆ ಮನೆ ಯಜಮಾನಿಗೆ ತಿಂಗಳಿಗೆ 2000 ರೂಪಾಯಿ ನೀಡುವ ಯೋಜನೆಯಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಈ ಯೋಜನೆಗೆ ನೊಂದಣಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾಕೇಂದ್ರ,ಸೇವಾಸಿಂಧು ವೆಬ್ ಸೈಟ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು.
ಯೋಜನೆ ಲಾಭ ಪಡೆಯಲು ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 8147500500ಗೆ ಪಡಿತರ ಸಂಖ್ಯೆಯನ್ನು SMS ಮಾಡಿದರೆ ತಕ್ಷಣ ನೋಂದಣಿ ಸ್ಥಳ ಗೊತ್ತುಪಡಿಸಿದ ದಿನಾಂಕ, ಸಮಯದ ಬಗ್ಗೆ ಸಂದೇಶ ಬರುತ್ತದೆ. ಯಾವುದೇ ಗೊಂದಲಗಳಿದ್ದರೆ 1902 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ