Kannada NewsKarnataka NewsLatestPolitics

*ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.

ರಾಜ್ಯ ಸರ್ಕಾರ ಶಿಷ್ಠಾಚಾರ ಉಲ್ಲಂಘಿಸಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿ ವಿಧೇಯಕ ಹರಿದು ಹಾಕಿ ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ 10 ಶಾಸಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಸ್ಪೀಕರ್ ಆದೇಶ ಖಂಡಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.

Home add -Advt

ತಕ್ಷಣ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಖಲಿಸಿ ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಸಿಎಂ ಜೊತೆ ಸ್ಪೀಕರ್ ಖಾದರ್ ಕೂಡ ಆಸ್ಪತ್ರೆಗೆ ಆಗಮಿಸಿ ಯತ್ನಾಳ್ ಆರೋಗ್ಯ ವಿಚಾರಿಸಿದರು.


Related Articles

Back to top button