Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬೆಳಗಾವಿ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿ ಗಂಟೆಗೆ 40-50 ವೇಗದಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆಯಲಿದೆ. ಮೀನುಗರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ .

ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದೆ ಕ್ರಮವಾಗಿ 111.5 ಮಿ.ಮೀ ಹಾಗೂ 113.5 ಮೀ.ಮಿ ಮಳೆಯಾಗಿದೆ.

Related Articles

Back to top button